-ಮುಂದಿನ 2 ವರ್ಷ ಬಿಎಸ್ ಯಡಿಯೂರಪ್ಪ ಮುಖ್ಯಮಂತ್ರಿ !
-130 ಸೀಟು ಗೆಲ್ಲಿಸಿಕೊಂಡು ಬರೋ ಪಣ ತೊಟ್ಟವರಂತೆ ಯಡಿಯೂರಪ್ಪ ಸಾಹೇಬರು!
ಬಹಳ ದಿನಗಳ ನಂತರ ಸಿಎಂ ಯಡಿಯೂರಪ್ಪ ಅವರು ರಾಜ್ಯಪಾಲ ವಜುಭಾಯ್ ವಾಲಾ ಅವರನ್ನು ಭೇಟಿ ಮಾಡಿದ್ರು. ರಾಜ್ಯಪಾಲರು ಕಣ್ಣಿನ ಆಪರೇಷನ್ ಮಾಡ್ಕೊಂಡಿದ್ದಾರೆ ಅನ್ನೋ ಕಾರಣ ಮುಂದಿಟ್ಟುಕೊಂಡು ರಾಜ್ಯಪಾಲರನ್ನು ಭೇಟಿ ಮಾಡಿದ ಯಡಿಯೂರಪ್ಪನವರು, ತಮ್ಮ ರಾಜಕೀಯ ನಿರ್ಧಾರವನ್ನು ರಾಜಭವನದ ಅಂಗಳದಲ್ಲಿ ಹೇಳಿಬಿಟ್ರು. ಅದೇನು ಅಂತ ಗೊತ್ತಾ…? ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ ತರುವ ಸವಾಲು ನನ್ನ ಮುಂದಿದೆ – ಸಿಎಂ ಬಿಎಸ್ವೈ..!
ಬೆಂಗಳೂರು: ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ 130ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು ಮತ್ತೊಮ್ಮೆ ಬಿಜೆಪಿಯನ್ನು ಅಧಿಕಾರಕ್ಕೆ ತರುವ ಸವಾಲು ನನ್ನ ಮುಂದಿದೆ ಅದಕ್ಕಾಗಿ ಈಗಿನಿಂದಲೇ ಎಲ್ಲ ರೀತಿಯ ಪ್ರಯತ್ನವನ್ನು ಮಾಡುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರಕಟಿಸಿದ್ದಾರೆ. ಒಳ್ಳೆಯ ಕೆಲಸ ಮಾಡುವ ಪ್ರಾಮಾಣಿಕ ಪ್ರಯತ್ನವನ್ನು ಮುಂಬರಲಿರುವ ಎರಡು ವರ್ಷದಲ್ಲಿ ಮಾಡಬೇಕಿದೆ.ಮುಂದಿನ ಚುನಾವಣೆಯಲ್ಲಿ 130ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು ಮತ್ತೊಮ್ಮೆ ಬಿಜೆಪಿಯನ್ನು ಅಧಿಕಾರಕ್ಕೆ ತರುವ ಸವಾಲು ನನ್ನ ಮುಂದಿದೆ. ಅದಕ್ಕಾಗಿ ಈಗಿನಿಂದಲೇ ಎಲ್ಲ ರೀತಿಯ ಪ್ರಯತ್ನವನ್ನು ಬರುವ ಎರಡು ವರ್ಷಗಳ ಕಾಲ ಮಾಡುತ್ತೇನೆ ಎನ್ನುವ ಭರವಸೆಯನ್ನು ರಾಜ್ಯದ ಜನರಿಗೆ, ಕಾರ್ಯಕರ್ತರಿಗೆ ಕೊಡುತ್ತಿದ್ದೇನೆ ಎಂದರು.
ಜಿಲ್ಲಾ ಪ್ರವಾಸ ಮಾಡಿ ಸಮಸ್ಯೆ ತಿಳಿದುಕೊಳ್ಳುವ ತೀರ್ಮಾನ ಮಾಡಿದ್ದೇನೆ. ಆ ನಿಟ್ಟಿನಲ್ಲಿ ಮುಂದಿನ ವಾರದಿಂದ ಪ್ರವಾಸ ಮಾಡುತ್ತೇನೆ.10-12 ಜಿಲ್ಲೆಗಳಿಗೆ ಪ್ರವಾಸ ಮಾಡುತ್ತೇನೆ ಎನ್ನುವ ಮೂಲಕ ಜಿಲ್ಲಾ ಪ್ರವಾಸದ ಮೂಲಕ ಪಕ್ಷ ಸಂಘಟನೆ ಮಾಡಿ ತಮ್ಮದೇ ನಾಯಕತ್ವ ಎನ್ನುವ ಸಂದೇಶವನ್ನು ವಿರೋಧಿ ಬಣಕ್ಕೆ ನೀಡಿದ್ದಾರೆ.
ರಮೇಶ್ ಜಾರಕಿಹೊಳಿ ದೆಹಲಿ ಪ್ರವಾಸದ ಕುರಿತ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಸಿಎಂ, ನಾನು ಯಾವುದೇ ವಿಷಯಗಳ ಬಗ್ಗೆ ಪ್ರತಿಕ್ರಿಯೆ ಕೊಡಲು ಹೋಗುತ್ತಿಲ್ಲ. ಎಲ್ಲವನ್ನೂ ಶಾಂತವಾಗಿ ಕೇಳುತ್ತಿದ್ದೇನೆ, ತಿಳಿದುಕೊಳ್ಳುತ್ತಿದ್ದೇನೆ. ನಾನು ಯಾವುದೇ ವಿಷಯದಲ್ಲೂ ಯಾವುದೇ ಪ್ರತಿಕ್ರಿಯೆ ಕೊಡುವುದಿಲ್ಲ ಇಷ್ಟು ಮಾತ್ರ ನಿಮಗೆ ಹೇಳುತ್ತೇನೆ ಎಂದರು.
ಸಿಡಿ ಪ್ರಕರಣದಲ್ಲಿ ಸಿಲುಕಿಸುವ ಕುರಿತು ಬಿಜೆಪಿಯವರೇ ಷಡ್ಯಂತ್ರ ಮಾಡಿದ್ದಾರೆ ಎನ್ನುವ ಮಾಹಿತಿಯನ್ನು ಮಾಧ್ಯಮಗಳಲ್ಲಿ ಕೇಳಿದ್ದೇನೆ ಅಷ್ಟೇ ಎಂದು ಹೆಚ್ಚು ಮಾತನಾಡಲು ನಿರಾಕರಿಸಿದ ಸಿಎಂ ನಾಯಕತ್ವ ಬದಲಾವಣೆ ಕುರಿತು ವಿಷಯ ಪ್ರಸ್ತಾಪಿಸುತ್ತಿದ್ದಂತೆ ಕೈ ಮುಗಿದು ನಿರ್ಗಮಿಸಿದರು.