ಹಿರಿಯ ನಿರ್ಮಾಪಕ ಕೆ.ಸಿ.ಎನ್ ಚಂದ್ರಶೇಖರ್ ನಿಧನರಾಗಿದ್ದಾರೆ. 69 ವರ್ಷದ ನಿರ್ಮಾಪಕ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಕನ್ನಡ ಚಿತ್ರರಂಗದಲ್ಲಿ ಕೆ.ಸಿ.ಎನ್ ಸಂಸ್ಥೆಗೆ ದೊಡ್ಡ ಹೆಸರಿದೆ. ನಿರ್ಮಾಪಕರಾಗಿ, ವಿತರಕರಾಗಿ, ಪ್ರದರ್ಶಕರಾಗಿ ಹಲವಾರು ವರ್ಷಗಳು ಚಿತ್ರೋದ್ಯಮದಲ್ಲಿ ಕೆಸಿಎನ್ ಚಂದ್ರಶೇಖರ್ ಹೆಸರು ಮಾಡಿದ್ದರು. ಹುಲಿ ಹಾಲಿನ ಮೇವು, ಶರಪಂಜರ, ಬಬ್ರುವಾಹನ, ಅಂತ ಸೇರಿದಂತೆ ಸದಭಿರುಚಿಯ ಚಿತ್ರಗಳನ್ನು ನೀಡಿದ್ದ ಕೆ.ಸಿ.ಎನ್ ಚಂದ್ರಶೇಖರ್ ಕನ್ನಡ ಚಿತ್ರೋದ್ಯಮದ ಬೆಳವಣಿಗೆಗೆ ಸಾಕಷ್ಟು ದುಡಿದಿದ್ದಾರೆ.
ಮೂರು ಬಾರಿ ದಕ್ಷಿಣ ಭಾರತ ಚಲನಚಿತ್ರ ವಾಣಿಜ್ಯ ಸಂಸ್ಥೆಯ ಅಧ್ಯಕ್ಷರಾಗಿದ್ದರು. ಅಲ್ಲದೆ ಅಂತಾರಾಷ್ಟ್ರೀಯ ಸಿನಿಮಾ ಸಂಸ್ಥೆಗಳಲ್ಲಿ ಹಾಗೂ ಅಂತಾರಾಷ್ಟ್ರೀಯ ಚಿತ್ರ ಪ್ರಶಸ್ತಿ ಆಯ್ಕೆ ಸಮಿತಿ ಸದಸ್ಯರಾಗಿದ್ದು ಮನ್ನಣೆ ಪಡೆದಿದ್ದರು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾಗಿಯೂ ಸೇವೆ ಸಲ್ಲಿದ್ದರು