ದರ್ಶನ್ ಸಿನಿಮಾ ‘ರಾಬರ್ಟ್’ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡಗೆ ಕೊಲೆ ಬೆದರಿಕೆ ಹಾಕಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿರುವ ಬಗ್ಗೆ ಸುದ್ದಿ ಸಿಕ್ಕಿದೆ. ಕಳೆದ ವರ್ಷ ನಿರ್ಮಾಪಕ ಉಮಾಪತಿ ಹಾಗೂ ಸಹೋದರ ದೀಪಕ್ ಹತ್ಯೆ ಮಾಡಲು ಸಂಚು ರೂಪಿಸಿದ್ದರು. ಅಲ್ಲದೆ ಕೊಲೆ ಮಾಡುವುದಾಗಿ ಬೆದರಿಕೆಯೊಡ್ಡಿದ್ದರು. ಈ ಆರೋಪದಡಿಯಲ್ಲಿ ಏಳು ಮಂದಿಯನ್ನು ಅರೆಸ್ಟ್ ಮಾಡಲಾಗಿತ್ತು. ಕೊಲೆ ಮಾಡಲು ಸ್ಕೆಚ್ ಹಾಕಿರೋ ಬಗ್ಗೆ ಖಚಿತ ಮಾಹಿತಿ ಪಡೆದು ಒಟ್ಟು ಏಳು ಮಂದಿಯನ್ನು ಬಂಧಿಸಲಾಗಿತ್ತು.
ನಿರ್ಮಾಪಕ ಉಮಾಪತಿ ಹಾಗೂ ಸಹೋದರ ದೀಪಕ್ ಕೊಲೆ ಪ್ರಕರಣ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಈ ಪ್ರಕರಣದ ಪ್ರಮುಖ ಆರೋಪಿ ರಾಜೇಶ್ ಉರ್ಫ್ ಕರಿಯ ರಾಜೇಶ್ ಮಾತ್ರ ತಲೆಮರೆಸಿಕೊಂಡಿದ್ದ. ಈ ವಿಷಯ ತಿಳಿದ ಪೊಲೀಸರು ‘ಆಪರೇಷನ್ ಬ್ಲಾಕ್ ಡಾಗ್’ ಹೆಸರಲ್ಲಿ ಹುಡುಕಾಟ ನಡೆಸಿದ್ರು.
ಕರಿಯ ರಾಜೇಶ್ ಬಾಂಬೆ ರವಿ ತಂಡದ ಸದಸ್ಯನಾಗಿದ್ದ ಎಂದು ತಿಳಿದು ಬಂದಿದ್ದು, ನೇಪಾಳದಲ್ಲಿ ತಲೆ ಮರೆಸಿಕೊಂಡಿದ್ದಾನೆಂಬ ಮಾಹಿತಿ ಸಿಕ್ಕಿತ್ತು. ಈತ ಹೊರಗಡೆ ಇದ್ದುಕೊಂಡು ಉದ್ಯಮಿಗಳಿಗೆ ಧಮ್ಕಿ ಹಾಕಿ, ಹಣ ವಸೂಲಿ ಮಾಡುತ್ತಿದ್ದರು. ಈ ಸಂಬಂಧ ದಕ್ಷಿಣ ವಿಭಾಗದ ಪೊಲೀಸರು ರಾಜೇಶ್ನನ್ನು ಬಂಧಿಸಿರೋದಾಗಿ ತಿಳಿದುಬಂದಿದೆ.