ಕಿಚ್ಚ ಸುದೀಪ್ ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಆದ್ರೆ, ತನ್ನ ಆರೋಗ್ಯ ಹದಗೆಟ್ಟಿದ್ದ ಮಾಹಿತಿಯನ್ನ ಹಂಚಿಕೊಂಡಿದ್ದು ಬಿಟ್ರೆ, ಬೇರಾವುದೇ ಮಾಹಿತಿಯನ್ನ ಬಿಟ್ಟುಕೊಟ್ಟಿರಲಿಲ್ಲ. ತನಗೇನಾಗಿತ್ತು? ಎಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ? ಈಗ ಹೇಗಿದ್ದಾರೆ? ಅನ್ನೋದು ಹೇಳಿರಲಿಲ್ಲ. ಈಗ ಅದೆಲ್ಲದಕ್ಕೂ ಉತ್ತರ ಕೊಟ್ಟಿದ್ದಾರೆ.
ಕಿಚ್ಚನ ಅನಾರೋಗ್ಯದ ಬಗ್ಗೆ ಅವರ ಅಭಿಮಾನಿಗಳು ಆತಂಕಕ್ಕೆ ಒಳಗಾಗಿದ್ದರು. ಸುದೀಪ್ ಬಹುಬೇಗ ಗುಣಮುಖರಾಗಲಿ ಅಂತ ವಿಶೇಷ ಪೂಜೆಯನ್ನೂ ಸಲ್ಲಿಸಿದ್ರು. ಈಗ ಸ್ವತ: ರನ್ನನೇ ತನ್ನ ಆರೋಗ್ಯದ ಬಗ್ಗೆ ಮಾಹಿತಿಯನ್ನ ಹಂಚಿಕೊಂಡಿದ್ದಾರೆ. ತಾನು ಆರೋಗ್ಯವಾಗಿದ್ದು, ಈ ವಾರವೇ ರಿಯಾಲಿಟಿ ಶೋನಲ್ಲಿ ಕಾಣಿಸಿಕೊಳ್ಳುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
‘ನನ್ನ ಆರೋಗ್ಯಕ್ಕಾಗಿ ಪ್ರಾರ್ಥಿಸಿ, ಹಾರೈಸಿದ ಎಲ್ಲರಿಗೂ ಧನ್ಯವಾದಗಳು. ನಾನು ಈಗ ಆರೋಗ್ಯವಾಗಿದ್ದೇನೆ. ನಾನು ಈ ವಾರ ಬಿಗ್ ಬಾಸ್ ವೇದಿಕೆ ಮೇಲೆ ನಿರೂಪಣೆ ಮಾಡಲು ಎದುರು ನೋಡುತ್ತಿದ್ದೇನೆ. ನನಗೆ ಚಿಕಿತ್ಸೆ ನೀಡಿದ ಡಾ.ವೆಂಕಟೇಶ್ ಮತ್ತು ಡಾ.ವಿನಯ್ ಅವರಿಗೆ ಧನ್ಯವಾದಗಳು’ ಎಂದು ಟ್ವೀಟ್ ಮಾಡಿದ್ದಾರೆ.
ಸುದೀಪ್ ಆರೋಗ್ಯವಾಗಿದ್ದೇನೆ ಎಂದು ಹೇಳಿದ್ದು ಕೇಳಿ ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ಮಾಣಿಕ್ಯನನ್ನು ನೋಡೋಕೆ ಕಾದು ಕೂತಿದ್ದಾರೆ. ಇನ್ನು ಕಿಚ್ಚನ ಕೋಟಿಗೊಬ್ಬ 3 ಇದೇ ವಾರ ರಿಲೀಸ್ ಆಗ್ಬೇಕಿತ್ತು. ಆದ್ರೆ, ಕೊರೊನಾದಿಂದ ಮತ್ತೆ ಮುಂದೂಡಲಾಗಿದೆ. ಇನ್ನು ವಿಕ್ರಾಂತ್ ರೋಣ ಆಗಸ್ಟ್ ತಿಂಗಳಲ್ಲಿ ಬಿಡುಗಡೆಯಾಗಲಿದೆ.