ಕರಾವಳಿ ಬ್ಯೂಟಿ, ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾರನ್ನು ಜುಲೈ 19ರ ರಾತ್ರಿ ಮುಂಬೈ ಪೊಲೀಸರು ಬಂಧಿಸಿದ್ದಾರೆ. ರಾಜ್ ಕುಂದ್ರಾರನ್ನು ಅಶ್ಲೀಲ ವೀಡಿಯೋ ಚಿತ್ರೀಕರಣ ಹಾಗೂ ಮಾರಾಟಕ್ಕೆ ಸಂಬಂಧಿಸಿದಂತೆ ಅರೆಸ್ಟ್ ಮಾಡಿದ್ದು ತನಿಖೆ ನಡೆಸಲಾಗುತ್ತಿದೆ. ಕಳೆದ ಫೆಬ್ರವರಿಯಲ್ಲೇ ಮುಂಬೈನ ಸೈಬರ್ ಕ್ರೈಂ ಬ್ರ್ಯಾಂಚ್ನಲ್ಲಿ ಅಶ್ಲೀಲ ವೀಡಿಯೋ ಚಿತ್ರೀಕರಣದ ಬಗ್ಗೆ ದೂರು ದಾಖಲಾಗಿತ್ತು. ಈ ಸಂಬಂಧ ತನಿಖೆಯನ್ನು ಚುರುಕುಗೊಳಿಸಿದ್ದ ಪೊಲೀಸರು ಉದ್ಯಮಿ ರಾಜ್ ಕುಂದ್ರಾರನ್ನು ರಾತ್ರೋ ರಾತ್ರಿ ಬಂಧಿಸಿದ್ದಾರೆ.
ಅಶ್ಲೀಲ ಚಿತ್ರಗಳನ್ನು ಚಿತ್ರೀಕರಿಸಿ, ಅವುಗಳನ್ನು ಕೆಲವು ಆ್ಯಪ್ಗಳ ಮೂಲಕ ಬಿತ್ತರಿಸಲಾಗುತ್ತಿತ್ತು. ಈ ಬಗ್ಗೆ ಮುಂಬೈ ಪೊಲೀಸರು ಹಲವು ದಿನಗಳಿಂದ ತನಿಖೆ ನಡೆಸುತ್ತಿದ್ದರು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಸ್ಟಿಂಗ್ ನಿರ್ದೇಶಕ ಹಾಗೂ ಯುವತಿಯನ್ನು ಕೆಲವು ದಿನಗಳ ಹಿಂದಷ್ಟೇ ಬಂಧಿಸಲಾಗಿತ್ತು. ಈಗ ಸೂಕ್ತ ಸಾಕ್ಷಾಧಾರಗಳನ್ನ ಸಂಗ್ರಹಿಸಿ ರಾಜ್ ಕುಂದ್ರಾರನ್ನು ಬಂಧಿಸಿದ್ದೇವೆ. ತನಿಖೆ ಮುಗಿಯುವವರೆಗೂ ಹೆಚ್ಚಿನ ಮಾಹಿತಿ ನೀಡಲಾಗುವುದಿಲ್ಲವೆಂದು ಮುಂಬೈ ಪೊಲೀಸರು ಹೇಳಿದ್ದಾರೆ.
ಅಶ್ಲೀಲ ಚಿತ್ರಗಳನ್ನು ಚಿತ್ರೀಕರಿಸಿ, ಅವುಗಳನ್ನು ವಿದೇಶಿ ಸರ್ವರ್ಗಳನ್ನು ಬಳಸಿ ಮೊಬೈಲ್ ಆ್ಯಪ್ಗಳ ಮೂಲಕ ಬಿತ್ತರಿಸಲಾಗುತ್ತಿತ್ತು. ಅಲ್ಲದೆ ಇಂಗ್ಲೆಂಡ್ ಮೂಲದ ಕೆಂಡ್ರಿಂಗ್ ಕಂಪನಿಯಲ್ಲಿ ರಾಜ್ ಕುಂದ್ರಾ ₹10 ಕೋಟಿ ಹೂಡಿಕೆ ಮಾಡಿದ್ದಾರೆ ಎನ್ನಲಾಗಿದೆ. ಇತ್ತೀಚೆಗೆ ಬಂಧಿಸಿದ್ದ ಉಮೇಶ್ ಎಂಬಾತ ಜೊತೆ ಕುಂದ್ರಾ ಒಪ್ಪಂದ ಮಾಡಿಕೊಂಡಿದ್ದು ತನಿಖೆಯಲ್ಲಿ ಗೊತ್ತಾಗಿದೆ.
ರಾಜಸ್ಥಾನ್ ರಾಯಲ್ಸ್ ಐಪಿಎಲ್ ತಂಡದ ಮಾಲೀಕರೂ ಆಗಿರೋ ರಾಜ್ ಕುಂದ್ರಾ ಮೇಲೆ ಸ್ಪಾಟ್ ಫಿಕ್ಸಿಂಗ್ ಆರೋಪ ಕೇಳಿಬಂದಿತ್ತು. ಹೀಗಾಗಿ ರಾಜಸ್ಥಾನ್ ರಾಯಲ್ಸ್ ತಂಡವನ್ನು ಬ್ಯಾನ್ ಮಾಡಲಾಗಿತ್ತು. ಬಳಿಕ ಸುಪ್ರೀಂ ಕೋರ್ಟ್ಯಲ್ಲಿ ಜಯ ಸಾಧಿಸಿದ್ದರು.